ಉದ್ಯಾನವನ, ರೆಸ್ಟೋರೆಂಟ್‌ಗಳಿಗೆ ಕುಟುಂಬ, ಮಹಿಳೆಯರೊಂದಿಗೆ ಹೋಗುವುದನ್ನು ನಿಷೇಧಿಸಿದ ತಾಲಿಬಾನ್.

43
firstsuddi

ಕಾಬೂಲ್ : ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ಬಳಿಕ ತಾಲಿಬಾನ್ ಮುಖ್ಯವಾಗಿ ಮಹಿಳೆಯರ ಮೇಲೆ ಹಿಡಿತ ಸಾಧಿಸುತ್ತಿದೆ. ಈ ಹಿಂದೆ ಪಾರ್ಕ್, ಜಿಮ್, ವಿಶ್ವವಿದ್ಯಾಲಯಗಳಿಗೆ ಮಹಿಳೆಯರು ಹೋಗುವುದನ್ನು ನಿಷೇಧಿಸಿದ ತಾಲಿಬಾನ್ ಇದೀಗ ಕುಟುಂಬದೊಂದಿಗೂ ಉದ್ಯಾನವನ ಹಾಗೂ ರೆಸ್ಟೋರೆಂಟ್‌ಗಳಿಗೆ ಹೋಗುವುದನ್ನು ನಿಷೇಧಿಸಿದೆ.

ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದಲ್ಲಿ ಉದ್ಯಾನವನಗಳು ಹಾಗೂ ರೆಸ್ಟೋರೆಂಟ್‌ಗಳಿಗೆ ಕುಟುಂಬ ಹಾಗೂ ಮಹಿಳೆಯರು ಹೋಗುವುದನ್ನು ತಾಲಿಬಾನ್ ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಪಶ್ಚಿಮ ಹೆರಾತ್ ಪ್ರಾಂತ್ಯದಲ್ಲಿ ತಾಲಿಬಾನ್ ಲಿಂಗ ಪ್ರತ್ಯೇಕತೆಯ ಯೋಜನೆಯನ್ನು ಜಾರಿಗೆ ತಂದಿದೆ. ಇದರ ಅಡಿಯಲ್ಲಿ, ಪುರುಷರು ಫ್ಯಾಮಿಲಿ ರೆಸ್ಟೋರೆಂಟ್‌ ನಲ್ಲಿ ಕುಟುಂಬ ಸದಸ್ಯರೊಂದಿಗೆ ತಿನ್ನಲು ಅನುಮತಿಸುವುದಿಲ್ಲ. ಇದಲ್ಲದೆ, ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಉದ್ಯಾನವನಕ್ಕೆ ಹೋಗಲು ಅನುಮತಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.

ಈ ಹಿಂದೆ ತಾಲಿಬಾನ್ ಅಫ್ಘಾನಿಸ್ತಾನದಲ್ಲಿ ಪುರುಷರು ಹಾಗೂ ಮಹಿಳೆಯರು ವಿವಿಧ ದಿನಗಳಲ್ಲಿ ಉದ್ಯಾನವನಕ್ಕೆ ಭೇಟಿ ನೀಡಬಹುದು ಎಂದು ತಿಳಿಸಿತ್ತು. ಅದರಂತೆ ಗುರುವಾರ, ಶುಕ್ರವಾರ ಮತ್ತು ಶನಿವಾರ ಮಹಿಳೆಯರ ದಿನವಾಗಿದ್ದು, ಪುರುಷರಿಗಾಗಿ ಉದ್ಯಾನವನಗಳನ್ನು ಭಾನುವಾರ, ಸೋಮವಾರ, ಮಂಗಳವಾರ, ಬುಧವಾರ ತೆರೆಯಲಾಗುತ್ತದೆ ಎಂದು ತಿಳಿಸಲಾಗಿತ್ತು.