ಉಪಚುನಾವಣೆಯ ಫಲಿತಾಂಶ ನೋಡಿ ಮನಸ್ಸಿಗೆ ಬಹಳ ದುಃಖ ಆಗುತ್ತದೆ, ಕೆ.ಆರ್. ಪೇಟೆ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಕಣ್ಣೀರು…

228
firstsuddi

ಚಿಕ್ಕಬಳ್ಳಾಪುರ : ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹೀನಾಯವಾಗಿ ಸೋಲನ್ನು ಕಂಡಿದ್ದು, ಕೆ.ಆರ್. ಪೇಟೆ ಕ್ಷೇತ್ರದಲ್ಲಿ ಜೆಡಿಎಸ್ ಸೋಲಿಗೆ ನಿಖಿಲ್ ಕುಮಾರಸ್ವಾಮಿ ಅವರು ಕಣ್ಣೀರು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಉಪಚುನಾವಣೆಯ ಫಲಿತಾಂಶವನ್ನು ನಾವು ನಿರೀಕ್ಷೆ ಮಾಡಿರಲಿಲ್ಲ. ಫಲಿತಾಂಶ ನೋಡಿ ಮನಸ್ಸಿಗೆ ಬಹಳ ದುಃಖ ಆಗುತ್ತದೆ. ನಮ್ಮ ತಂದೆ ರಾಜ್ಯದ ಜನತೆಗೆ ಏನು ಅನ್ಯಾಯ ಮಾಡಿದ್ದಾರೆ. ಅವರು 38 ಸ್ಥಾನ ಪಡೆದು ಮುಖ್ಯಮಂತ್ರಿ ಆಗಿದ್ದರು. ಬಹುಮತ ಇಲ್ಲದಿದ್ದರೂ ಹೇಳಿದ ಹಾಗೆ ರೈತರ ಸಾಲಮನ್ನಾ ಮಾಡಿದ್ದರು. ಆದರೆ ರಾಜ್ಯದ ಜನತೆ ಕುಮಾರಣ್ಣನ ಕೈ ಹಿಡಿಯಲಿಲ್ಲ. ಚುನಾವಣೆಯ ಫಲಿಂತಾಂಶವನ್ನು ಕಂಡು ಕುಮಾರಣ್ಣಾ ಬಹಳ ಬೇಸರ ವ್ಯಕ್ತಪಡಿಸಿದರು. ಕೆ.ಆರ್. ಪೇಟೆ ಕ್ಷೇತ್ರದ ಜನ ಕೂಡಾ ಯಾಕೆ ನಮ್ಮ ಕೈಬಿಟ್ಟರು ಎಂದು ಗೊತ್ತಿಲ್ಲ. ರಾಜ್ಯದ ಜನತೆಗೆ ನಮ್ಮ ತಂದೆ ಏನು ಅನ್ಯಾಯ ಮಾಡಿದ್ದಾರೆ ಎಂಬುವುದು ಗೊತ್ತಿಲ್ಲ ಎಂದು ಕಣ್ಣೀರು ಹಾಕಿದರು.