ಉಪ ಚುನಾವಣೆಯ ಫಲಿತಾಂಶ ಆಶ್ಚರ್ಯ ತಂದಿದೆ : ಡಿ.ಕೆ. ಶಿವಕುಮಾರ್.

749
firstsuddi

ನವದೆಹಲಿ : ಉಪ ಚುನಾವಣೆಯ ಫಲಿತಾಂಶ ಆಶ್ಚರ್ಯ ತಂದಿದೆ. ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪಿಗೆ ನಾವು ತಲೆ ಭಾಗುತ್ತೇವೆ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಫಲಿತಾಂಶವನ್ನು ಗಮನಿಸಿದರೆ ಯಾರೂ ಯಾವಾ ಪಕ್ಷಕ್ಕೆ ಬೇಕಾದರೂ ಹೋಗಿ ಚುನಾವಣೆಯಲ್ಲಿ ಸ್ಪರ್ಧಿಸಬಹುದು ಎಂಬಂತಿದೆ. ಮತದಾರರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಪಕ್ಷವನ್ನು ಪುನಃ ಕಟ್ಟುತ್ತೇವೆ ಎಂದರು. ಇದೇ ವೇಳೆ ನಾಯಕತ್ವ ಬದಲಾವಣೆ ಬಗ್ಗೆ ಪ್ರತಿಕ್ರಯಿಸಿದ ಅವರು, ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನು ನಾನಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿರುತ್ತೇವೆ ಎಂದರು.