ಮಂಗಳೂರು : ಉಳ್ಳಾಲದ ಮಾಜಿ ಶಾಸಕ ಬಿ.ಎಂ.ಇದಿನಬ್ಬ ಅವರ ಪುತ್ರನ ಮನೆಗೆ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಂದ ಎನ್ ಐಎ ಅಧಿಕಾರಿಗಳ ತಂಡ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.
ಬಿ.ಎಂ ಇದಿನಬ್ಬರ ಮಗ ಬಿ.ಎಂ ಭಾಷ ನಗರದ ಉಳ್ಳಾಲದಲ್ಲಿ ನೆಲೆಸಿದ್ದಾರೆ. ಸಿರಿಯಾ ಮೂಲದ ಐಸಿಸ್ ಉಗ್ರ ಸಂಘಟನೆ ಜೊತೆ ನಂಟು ಇರುವ ಶಂಕೆಯಲ್ಲಿ ದಾಳಿ ನಡೆದಿದೆ ಎನ್ನಲಾಗುತ್ತಿದೆ.
ಕಳೆದ 10 ವರ್ಷಗಳ ಹಿಂದೆ ಇದಿನಬ್ಬ ಅವರ ಪುತ್ರಿ ಐಸಿಸ್ ಜೊತೆ ಸಂಪರ್ಕ ಹೊಂದಿ ಕೇರಳದಿಂದ ನಾಪತ್ತೆಯಾಗಿದ್ದರು.










