ಎಂಇಎಸ್ ವಿರುದ್ಧ ಪ್ರತಿಭಟನೆ : ವಾಟಾಳ್ ನಾಗರಾಜ್ ಸೇರಿ ಹಲವರು ಪೊಲೀಸ್ ವಶಕ್ಕೆ…

61
firstsuddi

ಬೆಳಗಾವಿ : ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ವಾಟಾಳ್ ನಾಗರಾಜ್ ಸೇರಿ ಹಲವು ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಡಿ. 31ರಂದು ಕರ್ನಾಟಕ ಬಂದ್ ಹಿನ್ನೆಲೆ, ಬಂದ್ ಗೆ ಬೆಂಬಲ ನೀಡುವಂತೆ ವಾಟಾಳ್ ನಾಗರಾಜ್ ಬೆಳಗಾವಿಗೆ ಬಂದಿದ್ದರು. ಇಂದು ಕುವೆಂಪು ಅವರ ಜನ್ಮ ದಿನೋತ್ಸವ ಹಿನ್ನೆಲೆ ಬೆಂಬಲಿಗರ ಜೊತೆ ಸೇರಿ ವಾಟಾಳ್ ನಾಗರಾಜ್ ಕುವೆಂಪು ಅವರ ಭಾವಚಿತ್ರಕ್ಕೆ ನಮಿಸಿದರು. ನಂತರ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆಗೆ ಮುಂದಾದರು.

ಆಗ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದು ವಾಹನದಲ್ಲಿ ಕರೆದೊಯ್ದರು. ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಹೋರಾಟಗಾರರು ಎಂಇಎಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.