ಎಂಎಸ್ಸಿ ನರ್ಸಿಂಗ್, ಎಂಪಿಟಿ ಕೋರ್ಸ್ ಅರ್ಜಿ ಸಲ್ಲಿಸಲು ಡಿಸೆಂಬರ್ 2 ಕೊನೆ ದಿನ.

13

ಬೆಂಗಳೂರು: ಎಂಎಸ್ಸಿ ನರ್ಸಿಂಗ್, ಎಂಪಿಟಿ, ಎಂಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ನ ಸ್ನಾತಕೋತ್ತರ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಂದಿನಿಂದ ಅವಕಾಶ ಕಲ್ಪಿಸಿದೆ. ಡಿಸೆಂಬರ್ 2 ರೊಳಗೆ ಅರ್ಜಿ ಸಲ್ಲಿಸಬೇಕು. ರಾಜ್ಯದ ಅಭ್ಯರ್ಥಿಗಳು ಆಯಾಯ ಪದವಿ ಕೋರ್ಸ್‍ಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿ ಸಿದ್ಧಪಡಿಸಿ, 2024-25ನೇ ಸಾಲಿಗೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.