ಎಂವಿಎ ಸರ್ಕಾರದಿಂದ ಹೊರಬರಲು ಶಿವಸೇನೆ ಸಿದ್ಧ : ಸಂಜಯ್ ರಾವತ್.

54
firstsuddi

ಮುಂಬೈ : ಮಹಾ ವಿಕಾಸ್ ಆಘಾಡಿ ಮೈತ್ರಿಯಿಂದ ಹೊರಬರಲು ಶಿವಸೇನೆ ಸಿದ್ಧವಾಗಿದೆ. ಆದರೆ, ಪಕ್ಷದ ಬಂಡಾಯ ಶಾಸಕರು 24 ಗಂಟೆಗಳಲ್ಲಿ ಮುಂಬೈಗೆ ಬರಬೇಕೆಂದು ಶಿವಸೇನಾ ಸಂಸದ ಸಂಜಯ್ ರಾವತ್ ಷರತ್ತು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಶಿವ ಸೈನಿಕರೆಂದು ಹೇಳುತ್ತಿರುವ ನೀವು, ಪಕ್ಷ ತೊರೆಯುವುದಿಲ್ಲ ಎಂದಿರುವಿರಿ. 24 ಗಂಟೆಗಳಲ್ಲಿ ನೀವು ಮುಂಬೈಗೆ ಮರಳಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಚರ್ಚೆ ನಡೆಸುವುದಾದರೆ, ನಿಮ್ಮ ಬೇಡಿಕೆಯನ್ನು ಪರಿಗಣಿಸಲು ಸಿದ್ಧರಿದ್ದೇವೆ. ಟ್ವಿಟ್ಟರ್ ಮತ್ತು ವಾಟ್ಸಪ್ ನಲ್ಲಿ ಪತ್ರಗಳನ್ನು ಬರೆಯಬೇಡಿ ಎಂದರು.

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೂರಿದೆ. ಶಿವಸೇನೆಯ ಒಟ್ಟು 42 ಬಂಡಾಯ ಶಾಸಕರು ಏಕನಾಥ್ ಶಿಂಧೆ ಅವರೊಂದಿಗೆ ಇದ್ದಾರೆ.