ಎಎಪಿ ಪಕ್ಷದ ಸಿಎಂ ಅಭ್ಯರ್ಥಿ ಭಗವಂತ್ ಮಾನ್‍ಗೆ ಗೆಲುವು…

82
firstsuddi

ಚಂಡೀಗಢ(ಪಂಜಾಬ್) : ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿಯಾಗಿರುವ ಭಗವಂತ್ ಮಾನ್ ಅವರು ಧುರಿ ವಿಧಾನಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ. ಇವರ ವಿರುದ್ಧ ಕಾಂಗ್ರೆಸ್ ಶಾಸಕ ದಲ್ಬೀರ್ ಗೋಲ್ಡಿ ಸ್ಪರ್ಧಿಸಿದ್ದರು.

ಈ ಮೊದಲು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದ ಭಗವಂತ್ ಮಾನ್, ಈಗ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈಗಿನ ಟ್ರೆಂಡ್ ನಂತೆ ಪಂಜಾಬ್ ನಲ್ಲಿ 91 ಕ್ಷೇತ್ರಗಳಲ್ಲಿ ಆಪ್ , 18 ಕ್ಷೇತ್ರಗಳಲ್ಲಿ ಕಾಂಗ್ರೆಸ್, 5 ಕ್ಷೇತ್ರಗಳಲ್ಲಿ ಶಿರೋಮಣಿ ಅಕಾಲಿದಳ ಮುನ್ನಡೆ ಸಾಧಿಸಿವೆ.

ಪಂಜಾಬ್ ನಲ್ಲಿ ಆಪ್ ಬಹುಮತ ಪಡೆಯುತ್ತಿದ್ದಂತೆ, ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಅರವಿಂದ್ ಕೇಜ್ರಿವಾಲ್ ಈ ಕ್ರಾಂತಿಗಾಗಿ ಪಂಜಾಬ್ ಜನತೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.