ಎಚ್​ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲು…

51
firstsuddi

ಬೆಂಗಳೂರು: ಮಾಜಿ ಪ್ರಧಾನಿ ಎಚ್​ ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ ದೇವೇಗೌಡ ಅವರಿಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿನ ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ದೇವೇಗೌಡರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆತಂಕ ಪಡುವ ಅಗತ್ಯ ಇಲ್ಲ ಎಂದು ಮಣಿಪಾಲ್ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಎಚ್​ ಡಿ ದೇವೇಗೌಡ ಅವರಿಗೆ 90 ವರ್ಷ ಪೂರ್ಣಗೊಂಡಿವೆ. ಆದರೂ ಸಹ ಅವರು ಸಕ್ರಿಯ ರಾಜಕಾರಣದಲ್ಲಿದ್ದು, ಸದ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ, ಸಭೆಗಳನ್ನು ನಡೆಸುತ್ತಿದ್ದಾರೆ.