ಎಟಿಎಂ ಕಾರ್ಡ್ ಬಳಸಿ ವಂಚನೆ- ಅಂತರಾಜ್ಯ ಕಳ್ಳರ ಬಂಧನ…

59
firstsuddi

ಕೋಲಾರ: ಎಟಿಎಂ ಕಾರ್ಡ್ ಬಳಸಿ ವಂಚಿಸುತ್ತಿದ್ದ ಮೂವರು ಅಂತರಾಜ್ಯ ಕಳ್ಳರನ್ನು ಮುಳಬಾಗಿಲು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ತಮಿಳುನಾಡಿನ ಹೊಸೂರು ಮೂಲದ ಮಂಜುನಾಥ್, ಚಿನ್ನದೊರೈ ಹಾಗೂ ಮಂಜುನಾಥ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 13 ಸಾವಿರ ನಗದು, ನಾಲ್ಕು ಎಟಿಎಂ ಕಾರ್ಡ್‍ಗಳು, ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಎಟಿಎಂ ಬಳಿ ಹಣ ಡ್ರಾ ಮಾಡಲು ಸಹಾಯ ಕೇಳಿದವರ ಪಿನ್ ಪಡೆದು ವಂಚಿಸುತ್ತಿದ್ದರು. ಆರೋಪಿಗಳು ಬೆಂಗಳೂರು ಸೇರಿದಂತೆ ಕೋಲಾರ, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲೂ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದು, ಮೂರು ರಾಜ್ಯಗಳ ಪೊಲೀಸರಿಗೂ ಬೇಕಾಗಿದ್ದರು. ಆರೋಪಿಗಳ ವಿರುದ್ಧ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.