ಎತ್ತಿನ ಗಾಡಿ ಕೆರೆಯಲ್ಲಿ ಮುಳುಗಿ ನಾಲ್ವರ ಸಾವು…

210
firstsuddi

ಹಾಸನ : ಎತ್ತಿನ ಗಾಡಿ ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಳೇನರಸೀಪುರದ ಹೊಸಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ. ರಾಜೇಗೌಡ(55), ಲಕ್ಷ್ಮಿ(50), ರುಚಿತಾ(7), ಧೃತಿ(6) ಮೃತ ದುರ್ಧೈವಿಗಳು. ಎತ್ತಿ ಗಾಡಿಯಲ್ಲಿ ಆಲೂಗಡ್ಡೆಯನ್ನು ತುಂಬಿಕೊಂಡು ಬಿತ್ತನೆ ಮಾಡಲು ತೆರಳುತ್ತಿದ್ದ ವೇಳೆ ಎತ್ತುಗಳ ಕಾಲು ಜಾರಿ ಈ ಘಟನೆ ಸಂಭವಿಸಿದ್ದು, ಘಟನೆ ಹಳ್ಳಿಮೈಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.