ಬೆಳಗಾವಿ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಯರಗಟ್ಟಿ ತಾಲೂಕಿನ ಕುರಬಗಟ್ಟಿ ಬಳಿ ನಡೆದಿದೆ.
ಮೂಡಲಗಿ ತಾಲೂಕಿನ ಪಟಗುಂದಿ ಗ್ರಾಮದ ಮುತ್ತು ನಾಯಕ್ (08), ಗೋಪಾಲ್ ನಾಯಕ್ (45) ಹಾಗೂ ಧಾರವಾಡ ಮೂಲದ ಅನ್ನಪೂರ್ಣಾ ಶಿರೋಳ(53) ಮೃತ ದುರ್ದೈವಿಗಳು.
ಇನ್ನೂ ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










