ಎರಡು ಸರ್ಕಾರಿ ಬಸ್‍ಗಳ ನಡುವೆ ಡಿಕ್ಕಿ- ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ…

44
firstsuddi

ವಿಜಯಪುರ: ಎರಡು ಸರ್ಕಾರಿ ಬಸ್‍ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ತಾಲೂಕಿನ ಕವಲಗಿ ಬಳಿ ಹೆದ್ದಾರಿಯಲ್ಲಿ ನಡೆದಿದೆ.

ಸಿಂದಗಿಯಿಂದ ವಿಜಯಪುರಕ್ಕೆ ಬರುತ್ತಿದ್ದ ಬಸ್ ಹಾಗೂ ವಿಜಯಪುರದಿಂದ ಸಿಂದಗಿಗೆ ಹೋಗುತ್ತಿದ್ದ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ವೇಗವಾಗಿ ಬಂದ ಎರಡು ಬಸ್‍ಗಳು ಮುಖಾಮುಖಿ ಡಿಕ್ಕಿಯಾಗಿವೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಸದ್ಯ ಗಾಯಾಳು ಪ್ರಯಾಣಿಕರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಡಿಕ್ಕಿಯ ರಭಸಕ್ಕೆ ಎರಡೂ ಬಸ್‍ಗಳ ಮುಂಭಾಗ ಭಾರೀ ಪ್ರಮಾಣದಲ್ಲಿ ಜಖಂ ಆಗಿದೆ. ಮುಂಭಾಗದಲ್ಲಿದ್ದವರಿಗೆ ತೀವ್ರ ಪೆಟ್ಟಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಅಪಘಾತದ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್‍ಪಿ ಋಷಿಕೇಶ್ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.