ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಯಾದಗಿರಿ ಅಂತಿಮ ಸ್ಥಾನ ಗಳಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಳಿಸಿದ್ದು, ಈ ಬಾರಿ 83.89 % ಫಲಿತಾಂಶ ಸಾಧಿಸಿದೆ.
2023ರ ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆದಿದ್ದವು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಇವರಲ್ಲಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ – 86.74%, ಅನುದಾನ ಶಾಲೆ – 85.64%, ಖಾಸಗಿ – 90.89% ಫಲಿತಾಂಶ ಸಾಧಿಸಿದೆ. 4 ಜನ ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ್ದಾರೆ.
625 ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು:
1. ಭೂಮಿಕಾ ಪೈ- ನ್ಯೂ ಮೆಕಾಲೆ ಶಾಲೆ, ಹೊಸೂರು ರಸ್ತೆ, ಬೆಂಗಳೂರು.
2.ಯಶಸ್ಗೌಡ – ಬಿಜಿಎಸ್ ಶಾಲೆ, ಅಗಲಗುರ್ಕಿ, ಚಿಕ್ಕಬಳ್ಳಾಪುರ ಜಿಲ್ಲೆ.
3. ಅನುಪಮಾ ಶ್ರೀಶೈಲ್ ಹಿರೆಹೋಳಿ- ಶ್ರೀಕುಮಾರೇಶ್ವರ ಶಾಲೆ, ಸವದತ್ತಿ.
4. ಭೀಮನಗೌಡ – ಆಕ್ಸ್ಫರ್ಡ್ ಆಂಗ್ಲ ಶಾಲೆ, ನಾಗರಬೆಟ್ಟ, ವಿಜಯಪುರ.
ಗ್ರಾಮೀಣ ಮತ್ತು ಸರ್ಕಾರ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 3,41,108( 80.08%) ಹಾಗೂ ಬಾಲಕಿಯರು – 3,59,511( 87.98%) ಪಾಸ್ ಆಗಿದ್ದಾರೆ. ಈ ಬಾರಿ ಮೊದಲ ಸ್ಥಾನವನ್ನು ಚಿತ್ರದುರ್ಗ (96.80%) ಹಾಗೂ ದ್ವಿತೀಯ ಸ್ಥಾನವನ್ನು ಮಂಡ್ಯ (96.74%), ತೃತೀಯ ಸ್ಥಾನವನ್ನು ಹಾಸನ (96.68%) ಜಿಲ್ಲೆ ಪಡೆದುಕೊಂಡಿದೆ. ಇನ್ನೂ ಕೊನೆ ಸ್ಥಾನದಲ್ಲಿ ಯಾದಗಿರಿ (75.49%) ಜಿಲ್ಲೆಯಿದೆ.










