ಎಸ್‍ಐಟಿ ತನಿಖೆ ಆರಂಭದಲ್ಲಿಯೇ ರಮೇಶ್ ಜಾರಕಿಹೊಳಿಯವರನ್ನು ಬಂಧಿಸಬೇಕು ಎನ್ನುವುದು ತಪ್ಪು : ಡಿಜಿಪಿ ಪ್ರವೀಣ್ ಸೂದ್.

146
firstsuddi

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಅವರು ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಅವರ ಕೆಲಸವನ್ನು ಮಾಡುತ್ತಿದ್ದಾರೆ. ಎಸ್‌ಐಟಿ ಮೇಲೆ ಯಾರೂ ಕೂಡ ಒತ್ತಡವನ್ನು ಏರುತ್ತಿಲ್ಲ. ಎಸ್‌ಐಟಿ ತನಿಖೆ ಆರಂಭದಲ್ಲಿಯೇ ರಮೇಶ್ ಜಾರಕಿಹೊಳಿಯವರನ್ನು ಬಂಧನ ಮಾಡಬೇಕು ಎನ್ನುವುದು ತಪ್ಪು. ಪ್ರಕರಣದ ತನಿಖೆ ಅಂತ್ಯವಾಗಿದ್ದರೂ ಬಂಧಿಸದಿದ್ದರೆ ಆಗ ಪ್ರಶ್ನಿಸಬಹುದು. ಎಸ್‌ಐಟಿ ತನಿಖೆ ಮೇಲೆ ನನಗೆ ಸಂಪೂರ್ಣ ಭರವಸೆ ಇದೆ. ಪ್ರತಿದಿನ ಎಸ್‌ಐಟಿ ತನಿಖೆಯ ಬಗ್ಗೆ ಕೇಳುವುದು ತಪ್ಪಾಗುತ್ತದೆ. ಎಸ್‌ಐಟಿ ಹಂತ ಹಂತವಾಗಿ ತನಿಖೆ ನಡೆಸುತ್ತಿದೆ. ಪ್ರತಿ ದಿನ ಕರೆ ಮಾಡಿ ತನಿಖೆ ಯಾವ ಹಂತದಲ್ಲಿ ಇದೆ ಎಂದು ಕೇಳುವುದು ಸರಿಯಲ್ಲ. ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತದೆ ಎಂಬ ಭರವಸೆ ಇದೆ ಎಂದು ಅವರು ತಿಳಿಸಿದ್ದಾರೆ.