ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರದ ಲ್ಯಾಬ್ ನಲ್ಲಿ ಬೆಂಕಿ ಅವಘಡ..!

105
firstsuddi

ದಕ್ಷಿಣ ಕನ್ನಡ : ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರದ ಲ್ಯಾಬ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಉಳ್ಳಾಲ ಸಮೀಪದ ಬಬ್ಬುಕಟ್ಟೆಯಲ್ಲಿ ನಡೆದಿದೆ.

ಬಬ್ಬುಕಟ್ಟೆಯ ಖಾಸಗಿ ಶಾಲೆಯ ಲ್ಯಾಬ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪಕ್ಕದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಗೂ ಬೆಂಕಿ ತಗುಲಿದೆ. ಈ ವೇಳೆ ತಕ್ಷಣ ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳನ್ನು ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡಿದ್ದಾರೆ. ಲ್ಯಾಬ್ ನಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.