ನವದೆಹಲಿ : ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ಭಾರತವನ್ನು ಏಪ್ರಿಲ್ 14ರ ವರೆಗೂ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದು, ಏಪ್ರಿಲ್ 14ರ ಬಳಿಕ ಲಾಕ್ಡೌನ್ ಮುಂದುವರೆಯುತ್ತದೆ ಎಂಬ ವದಂತಿಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಯಿಸಿದ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು, ನಾವು ಈಗಾಗಲೇ ಏಪ್ರಿಲ್ 14ರ ವರೆಗೆ ಹೊರಡಿಸಿರುವ ಲಾಕ್ಡೌನ್ ಆದೇಶವನ್ನು ಮುಂದುವರೆಸುವ ಚಿಂತನೆ ನಡೆಸಿಲ್ಲ. ಈ ಕುರಿತು ಯಾವುದೇ ಚರ್ಚೆಗಳನ್ನು ಮಾಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಏಪ್ರಿಲ್ 14ರ ಬಳಿಕ ಲಾಕ್ಡೌನ್ ಮುಂದುವರೆಯಲಿದೆ ಎಂಬ ಸುದ್ದಿಯನ್ನು ಕೇಳಿ ನನಗೆ ಆಶ್ಚರ್ಯವಾಗಿದೆ ಎಂದು ಹೇಳಿದ್ದಾರೆ.










