ಹುಬ್ಬಳ್ಳಿ: ಏರ್ ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಏರ್ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ನೆಪದಲ್ಲಿ ಜನರನ್ನು ದಾರಿ ತಪ್ಪಿಸೋ ಯತ್ನ ನಡೆಸಿದ್ದಾರೆ. ಇದು 14ನೇ ಆವೃತಿಯ ಏರ್ ಶೋ ಆಗಿದೆ. ಹಿಂದಿನಿಂದಲೂ ಇದನ್ನು ಮೋದಿಯೇ ಆರಂಭಿಸಿದ್ರಾ? ಏರ್ ಶೋ ಬರೋದ್ರಿಂದ ಬಡತನ ನಿವಾರಣೆಯಾಗುತ್ತಾ? ಎಂದು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ಮೈತ್ರಿ ಸರ್ಕಾರ ಬಂದ 2 ತಿಂಗಳಲ್ಲೇ ಸರ್ಕಾರ ಪತನ ಬಗ್ಗೆ ಹೇಳಿದರು. ಬಿಜೆಪಿಯ ಅಕ್ರಮ ಹೊರ ತಂದಿದ್ದು ನಾನು, ಸಿದ್ದರಾಮಯ್ಯ ಅಲ್ಲ. ನಿಮ್ಮ ಯೋಗ್ಯತೆಗೆ ಸರಿಯಾದ ರೀತಿಯಲ್ಲೇ ಮಾತನಾಡಿ. ಸಿದ್ದರಾಮಯ್ಯ ಕುರ್ಚಿಗಾಗಿ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರೂ ನನಗೆ ಸಿಎಂ ಸ್ಥಾನ ಕೊಡುವುದಕ್ಕೆ ಸಿದ್ದರಿದ್ದರು. ಇನ್ನೂ 10 ವರ್ಷವಾದರೂ ಇವರಿಗೆ ಬಿಜೆಪಿಯನ್ನು ತೆಗೆಯಲು ಆಗಲ್ಲ. ಜೆಡಿಎಸ್ ನಿಂದ ಮಾತ್ರ ಬಿಜೆಪಿಯನ್ನು ತೆಗೆಯೋಕೆ ಸಾಧ್ಯ ಎಂದರು.
ಬ್ರಾಹ್ಮಣ ಸಿಎಂ ಹೇಳಿಕೆ ವಿಚಾರವಾಗಿ ಮಾತನಾಡಿದ ಹೆಚ್ ಡಿಕೆ, ಬ್ರಾಹ್ಮಣ ಸಮುದಾಯ ನನ್ನ ವಿರುದ್ಧ ತಿರುಗಿ ಬಿದ್ದಿಲ್ಲ. ಬಿಜೆಪಿಯವರು ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಡ್ತಿಲ್ಲ. ನಾನು ಪೇಶ್ವೆ ಮೂಲದ ಬಗ್ಗೆ ಪ್ರಶ್ನಿಸಿದ್ದೇನೆ. ಈಗಲೂ ನನ್ನ ಹೇಳಿಕೆಗೆ ನಾನು ಬದ್ಧ. ಅದಕ್ಕೆ ಉತ್ತರ ಕೊಡಲಿ ಎಂದಿದ್ದಾರೆ.










