ಏಳು ಭ್ರೂಣ ಪತ್ತೆ ಪ್ರಕರಣ ; ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್.

74
firstsuddi

ಬೆಳಗಾವಿ : ಜಿಲ್ಲೆಯ ಮೂಡಲಗಿ ಪಟ್ಟಣದ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ ಪ್ರಕರಣ ಸಂಬಂಧ ಬೆಳಗಾವಿ ಡಿಎಚ್ಒ ನೇತೃತ್ವದ ತಂಡ ನವಜೀವನ ಆಸ್ಪತ್ರೆ ಹಾಗೂ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಸೇರಿದಂತೆ ಒಟ್ಟು ಆರು ಆಸ್ಪತ್ರೆಗಳ ಮೇಲೆ ದಾಳಿ ನಡೆಸಲಾಗಿದ್ದು, ದಾಳಿ ವೇಳೆ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ಹಾಗೂ ನವಜೀವನ ಆಸ್ಪತ್ರೆಗಳ ಕೈವಾಡ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಎರಡು ಆಸ್ಪತ್ರೆಗಳನ್ನು ಡಿಎಚ್ ಒ ಮಹೇಶ ಕೋಣಿ ಸೀಜ್ ಮಾಡಿದ್ದಾರೆ.

ನಿನ್ನೆ ದಾಳಿ ನಡೆದ ಸಂದರ್ಭದಲ್ಲಿ ವೆಂಕಟೇಶ ಮೆಟರ್ನಿಟಿ ಆಸ್ಪತ್ರೆ ವೈದ್ಯೆ ಡಾ.ವೀಣಾ ಕಣಕರೆಡ್ಡಿ ಏಳು ಭ್ರೂಣಗಳನ್ನು ನಾವೇ ಎಸೆದಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾರೆ. ನಿನ್ನೆ ಸಿಕ್ಕಿರುವ ಏಳು ಭ್ರೂಣಗಳು ಮೂರು ವರ್ಷಗಳ ಹಿಂದೆ ಅಬಾರ್ಷನ್ ಮಾಡಿದ್ದವುಗಳು ಎಂಬ ವಿಚಾರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ. ಪೊಲೀಸರ ದಾಳಿ ಭೀತಿಯಿಂದ ಕಳೆದ ಜೂನ್.23ರಂದು ರಾತ್ರೋರಾತ್ರಿ ಏಳು ಭ್ರೂಣಗಳನ್ನು ಐದು ಬಾಟಲಿಗಳಲ್ಲಿ ಆಸ್ಪತ್ರೆ ಸಿಬ್ಬಂದಿ ಹಳ್ಳಕ್ಕೆ ಎಸೆದಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಆಸ್ಪತ್ರೆ ಸಿಬ್ಬಂದಿ ಎಡವಟ್ಟು ಬಯಲಾಗಿದ್ದು, ಈಗಾಗಲೇ ಆಸ್ಪತ್ರೆ ಸೀಜ್ ಮಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತ ನಿಯಮಗಳನ್ನು ಗಾಳಿಗೆ ತೂರಿ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಲಿಂಗ ಪತ್ತೆ ಹಚ್ಚುತ್ತಿದ್ದಾರಾ? ಅಥವಾ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ವಿಚಾರ ಗೊತ್ತಿದ್ರೂ ಸುಮ್ಮನೆ ಕುಳಿತಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.