ಕೇರಳ : ಏಳು ವಾಹನಗಳ ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತ್ರಿಶೂರ್ ಜಿಲ್ಲೆಯ ಕುತಿರನ್ ಬಳಿ ನಡೆದಿದೆ. ತಮಿಳುನಾಡಿನಿಂದ ಬರುತ್ತಿದ್ದ ಲಾರಿ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಚಲಿಸುತ್ತಿದ್ದ ಎರಡು ಕಾರು ಹಾಗೂ ಬೈಕ್‍ಗಳಿಗೆ ಗುದ್ದಿದ್ದು, ಇಬ್ಬರು ಬೈಕ್ ಸವಾರರು ಹಾಗೂ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










