ಐಎಎಸ್ ಅಧಿಕಾರಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ – ದೂರು ದಾಖಲು…

53
firstsuddi

ಬೆಂಗಳೂರು : ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಐಎಎಸ್ ಅಧಿಕಾರಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊಡಗು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆಕಾಶ್ ವಿರುದ್ಧ ಅವರ ಪತ್ನಿ ವಂದನಾ ಅವರು ಬೆಂಗಳೂರಿನ ಪೂರ್ವ ವಿಭಾಗದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಆಕಾಶ್ ಅವರು 2022ರಲ್ಲಿ ನಿವೃತ್ತ ಡಿಐಜಿ ಪುತ್ರಿ ವಂದನಾ ಅವರನ್ನು ವಿವಾಹವಾಗಿದ್ದರು. ಆದರೆ ಐಎಎಸ್ ಅಧಿಕಾರಿ ಆಕಾಶ್ ವರದಕ್ಷಿಣೆಗಾಗಿ ಪೀಡಿಸುತ್ತಿದ್ದರು. ಅಷ್ಟೇ ಅಲ್ಲದೇ ವರದಕ್ಷಿಣೆ ನೀಡಲು ಒಪ್ಪದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಂದನಾ ಅವರು ನೀಡಿದ ದೂರಿನ ಅನ್ವಯ ಪೊಲೀಸರು ಪತಿ ಆಕಾಶ್, ತಂದೆ-ತಾಯಿ ಮತ್ತು ಸಹೋದರನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.