ಐಎಸ್‍ಎಸ್‍ಎಫ್ ವಿಶ್ವಕಪ್ ಶೂಟಿಂಗ್ ಸ್ಪರ್ದೆಯಲ್ಲಿ ಚಿನ್ನದ ಪದಕ ತಮ್ಮದಾಗಿಸಿಕೊಂಡ ತಮಿಳುನಾಡಿನ ಇಳಾವೆನಿಲ್…

232
firstsuddi

ನವದೆಹಲಿ : ಬ್ರೆಜಿಲ್‍ನಲ್ಲಿ ನಡೆಯುತ್ತಿರುವ ಐಎಸ್‍ಎಸ್‍ಎಫ್ ವಿಶ್ವಕಪ್ ಶೂಟಿಂಗ್ ಸ್ಪರ್ದೆಯ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಇಳಾವೆನಿಲ್ ಅವರು ಚಿನ್ನದ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಮೂಲದ 20 ವರ್ಷದ ಇಳಾವೆನಿಲ್ ಅವರು ನಿನ್ನೆ ನಡೆದ ಫೈನಲ್ ಸುತ್ತಿನಲ್ಲಿ ಒಟ್ಟು 251.7 ಅಂಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಫೈನಲ್ ಪ್ರವೇಶಿಸಿದ್ದ ಮತ್ತೊಬ್ಬ ಭಾರತೀಯ ಶೂಟರ್ ಅಂಜುಮ್ ಮೌದ್ಗಿಲ್ ಅವರು 166.8 ಅಂಕ ಗಳಿಸುವ ಮೂಲಕ 6ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎರಡು ಬಾರಿ ವಿಶ್ವ ಚಾಂಪಿಯನ್ ಆಗಿದ್ದ ಅಪೂರ್ವಿ ಚಂಡೇಲಾ ಅವರು 11ನೇ ಸ್ಥಾನ ಪಡೆದುಕೊಂಡಿದ್ದಾರೆ.