ಐಎಎಸ್ ಅಧಿಕಾರಿಗಳ ವರ್ಗಾವಣೆ ಬಳಿಕ ಮೈಸೂರು ಡಿಎಚ್‍​ಒ ಎತ್ತಂಗಡಿ…

114
firstsuddi

ಮೈಸೂರು : ಐಎಎಸ್ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಹಾಗೂ ಶಿಲ್ಪಾನಾಗ್ ಅವರ ವರ್ಗಾವಣೆ ಬಳಿಕ ಇದೀಗ ಮತ್ತೊಬ್ಬ ಹಿರಿಯ ಅಧಿಕಾರಿಯನ್ನು ಎತ್ತಂಗಡಿ ಮಾಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ವಿಕೋಪ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಣೆ ಮಾಡಲಿಲ್ಲ ಎನ್ನುವ ಕಾರಣಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಅಮರನಾಥ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಇವರ ಜಾಗಕ್ಕೆ ಆರೋಗ್ಯ ಇಲಾಖೆ ವಿಭಾಗಿಯ ಉಪ ನಿರ್ದೇಶಕ ಡಾ.ಕೆ.ಎಚ್. ಪ್ರಸಾದ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಸಾವು ಅಧಿಕಗೊಳ್ಳಲು ಸೂಕ್ತ ನಿರ್ವಹಣೆ ಕೊರತೆ ಕಾರಣ ಎನ್ನಲಾಗಿತ್ತು.ಅಲ್ಲದೇ ಕೋವಿಡ್ ಪರಿಸ್ಥಿತಿ ನಿರ್ವಹಣೆ ವಿಚಾರವಾಗಿ ಆರೋಗ್ಯಾಧಿಕಾರಿ ಅಮರ್ ನಾಥ್ ಅವರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಪಾಲಿಕೆ ಆಯುಕ್ತರಾಗಿದ್ದ ಶಿಲ್ಪಾನಾಗ್ ಅವರಿಗೆ ಕಾಲಕಾಲಕ್ಕೆ ಮಾಹಿತಿ ಕೊಟ್ಟು ಸಮನ್ವಯ ಮಾಡುವುದರಲ್ಲೂ ಅಮರ್ ನಾಥ್ ಅವರು ವಿಫಲರಾಗಿದ್ದರು ಎನ್ನುವ ಮಾಹಿತಿ ಸರಕಾರಕ್ಕೆ ಹೋಗಿತ್ತು.