ಐಪಿಎಲ್ ಬೆಟ್ಟಿಂಗ್ : ಸಾಲ ತೀರಿಸಲಾಗದೆ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ…

47
firstsuddi

ಬಾಗಲಕೋಟೆ : ಐಪಿಎಲ್ ಬೆಟ್ಟಿಂಗ್ ನಿಂದ ಸಾಲ ಮಾಡಿಕೊಂಡು ಬಳಿಕ ಸಾಲ ತೀರಿಸಲಾಗದೆ ವ್ಯಕ್ತಿಯೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲ್ಲೂಕಿನ ಕಲಾದಗಿ ಗ್ರಾಮದ ನಿವಾಸಿಯಾದ ಸೈಯದ್ ವಾಳೆ( 38) ಮೃತ ವ್ಯಕ್ತಿ. ಹಣ್ಣಿನ ವ್ಯಾಪಾರಿಯಾಗಿರುವ ಈತ ಜಿಲ್ಲೆಯ ಬೀಳಗಿ ತಾಲ್ಲೂಕಿನ ಕಾತರಕಿ ಗ್ರಾಮದ ಬಳಿಯ ಘಟಪ್ರಭಾ ನದಿಗೆ ಹಾರಿ ಸಾವನ್ನಪಿದ್ದಾನೆ.

ಸೈಯದ್ ಐಪಿಎಲ್ ನಲ್ಲಿ 20 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ. ಈ ಹಿನ್ನೆಲೆ ಸಾಲ ಕೊಟ್ಟವರ ಕಿರಿಕಿರಿ, ಬೆದರಿಕೆ ಹಾಗೂ ಪಡೆದ ಸಾಲ ತೀರಿಸಲಾಗದೆ ಮನನೊಂದು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.

ಈತನಿಗಾಗಿ ಅಗ್ನಿಶಾಮಕ ದಳ ಸಿಬ್ಬಂದಿ, ಮೀನುಗಾರರರು ಹುಡುಕಾಟ ನಡೆಸಿದ್ದರು. ಆದರೆ ಮೃತ ಸಯ್ಯದ್ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ನದಿಯಲ್ಲಿ ಶವ ಪತ್ತೆಯಾಗಿದೆ. ಕಲಾದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.