ಐಪಿಎಸ್ ರವಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ತಡೆ…

68
firstsuddi

ಬೆಂಗಳೂರು : ಐಪಿಎಸ್ ರವಿ ಚನ್ನಣ್ಣವರ್ ವರ್ಗಾವಣೆ ಆದೇಶಕ್ಕೆ ಸರ್ಕಾರದಿಂದ ತಡೆ ನೀಡಲಾಗಿದೆ.

ಎರಡು ದಿನಗಳ ಹಿಂದೆ ರವಿ ಡಿ.ಚನ್ನಣ್ಣನವರ್ ಸೇರಿದಂತೆ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಸಿಐಡಿ ಎಸ್ಪಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಎಂಡಿಯಾಗಿ ವರ್ಗಾಯಿಸಲಾಗಿತ್ತು. ಆದರೆ ಇದೀಗ ಸರ್ಕಾರ ಮುಂದಿನ ಆದೇಶದವರೆಗೆ ತಡೆಹಿಡಿದಿದೆ.

ರವಿ ಡಿ.ಚನ್ನಣ್ಣನವರ್ ವಿರುದ್ಧ ಭ್ರಷ್ಟಾಚಾರದ ಆರೋಪಗಳು ಕೇಳಿ ಬರುತ್ತಿವೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಳು ಪ್ರಸಾರವಾಗದಂತೆ ಕ್ರಮವಹಿಸಲು ಚನ್ನಣ್ಣನವರ್ ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದರು. ಇದರ ನಡುವೆಯೂ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿತ್ತು.