ಐಸಿಸ್ ಜೊತೆ ಸಂಪರ್ಕ ಶಂಕೆ ; ಗಂಗಾವತಿಯಲ್ಲಿ ಮತ್ತೊಬ್ಬನ ಬಂಧನ…

57
firstsuddi

ಕೊಪ್ಪಳ : ಐಸಿಸ್ ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಗಂಗಾವತಿಯಲ್ಲಿ ಹಣ್ಣಿನ ವ್ಯಾಪಾರಿಯೊಬ್ಬರನ್ನು ತಡರಾತ್ರಿ ಶಿವಮೊಗ್ಗದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಬಂಧಿತ ಶಂಕಿತ ಉಗ್ರ ಶಬ್ಬೀರ್ ಮಂಡಲಗಿರಿಯಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಇವರು ಶಿವಮೊಗ್ಗದಲ್ಲಿ ಬಂಧನಕ್ಕೊಳಗಾದ ಯಾಸಿನ್ ಹಾಗೂ ಮಾಝ್ ಜೊತೆಗೆ ಸಂಪರ್ಕ ಹೊಂದಿದ್ದರು ಎನ್ನಲಾಗ್ತಿದೆ. ಮೊಬೈಲ್ ಕಾಲ್ ಹಾಗೂ ಡೇಟಾಗಳ ಆಧಾರದ ಮೇಲೆ ಪೊಲೀಸರು ಶಬ್ಬೀರ್ ನನ್ನು ಬಂಧಿಸಿದ್ದಾರೆ. ಇದೀಗ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ನಿಷೇಧಿತ ಭಯೋತ್ಪಾದಕ ಸಂಘಟನೆ ಜೊತೆ ನಂಟು ಹೊಂದಿರುವ ಕಾರಣ ಮೂವರು ಶಂಕಿತರಾದ ಶಿವಮೊಗ್ಗದ ಸಿದ್ದೇಶ್ವರ ನಗರದ ನಿವಾಸಿ ಸಯ್ಯದ್ ಯಾಸೀನ್ (21) ಹಾಗೂ ಮಂಗಳೂರಿನ ಮಾಜ್ ಮುನೀರ್ ಅಹಮ್ಮದ್ (22) ಮತ್ತು ತೀರ್ಥಹಳ್ಳಿ ಸೂಪ್ಪುಗುಡ್ಡೆಯ ನಿವಾಸಿ ಶಾರೀಕ್ ಎಂಬುವವರನ್ನು ಪೊಲೀಸರು ಬಂಧಿಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ.