ಗುರುವಾರದಿಂದ ಒಂದು ವಾರಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್…

186
firstsuddi

ಮಂಗಳೂರು: ದಕ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಜುಲೈ 16 ರಿಂದ ಒಂದು ವಾರದ ಕಾಲ ಜಿಲ್ಲೆಯನ್ನು ಲಾಕ್ ಡೌನ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ರಾಜ್ಯದಲ್ಲಿ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಲಾಕ್‍ಡೌನ್ ಮಾಡುವ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಲಾಕ್‍ಡೌನ್ ಮಾಡುವ ಅಧಿಕಾರವನ್ನು ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಬುಧವಾರ ರಾತ್ರಿಯಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಮಾಡಲು ಮುಂದಾಗಿದ್ದಾರೆ. ಸಾರ್ವಜನಿಕರು ತಮಗೆ ಬೇಕಾದ ಅಗತ್ಯ ವಸ್ತುಗಳನ್ನು ಇಂದು ಮತ್ತು ನಾಳೆ ಖರೀದಿಸಬಹುದು ಬಳಿಕ ಒಂದು ವಾರ ಕಟ್ಟುನಿಟ್ಟಿನ ಲಾಕ್‍ಡೌನ್ ಜಾರಿಯಲ್ಲಿರುತ್ತದೆ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿಳಿಸಿದ್ದಾರೆ.