ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ…

59
firstsuddi

ಚಾಮರಾಜನಗರ: ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮಹದೇವಸ್ವಾಮಿ (48), ಸವಿತಾ (40), ಸಿಂಚನಾ (13) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮನೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಆಸ್ತಿ ವಿಚಾರಕ್ಕೆ ಗಲಾಟೆ ನಡೆಯುತ್ತಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.