ಒಂದೇ ಕುಟುಂಬದ ಮೂವರು ಸಾವಿಗೆ ಶರಣು…

65
firstsuddi

ಹಾಸನ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.

ಸತ್ಯಪ್ರಸಾದ್(54), ಅನ್ನಪೂರ್ಣ(50), ಗೌರವ್(21) ಮೃತ ದುರ್ದೈವಿಗಳು. ಸತ್ಯ ಪ್ರಸಾದ್ ಬೇಲೂರು ರಸ್ತೆಯಲ್ಲಿ ಪೆಟ್ರೋಲ್ ಬಂಕ್ ಮಾಲೀಕತ್ವ ಹೊಂದಿದ್ದಾರೆ. ಮಗ ಗೌರವ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರೆ, ಸತ್ಯಪ್ರಸಾದ್ ಅವರ ಪತ್ನಿ ಅನ್ನಪೂರ್ಣ ಗೃಹಿಣಿಯಾಗಿದ್ದರು.

ಸತ್ಯ ಪ್ರಸಾದ್ ಅವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಜೊತೆಗೆ ಪೆಟ್ರೋಲ್ ಬಂಕ್ ಕೂಡ ಉತ್ತಮ ಸ್ಥಿತಿಯಲ್ಲಿ ನಡೆಯುತ್ತಿರಲಿಲ್ಲ. ಹೀಗಾಗಿ ಸತ್ಯ ಪ್ರಸಾದ್ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಮೃತದೇಹಗಳನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಘಟನೆ ಸಂಬಂಧ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.