ಒನಕೆ ಓಬವ್ವ ಜಯಂತಿ – ಕನ್ನಡದಲ್ಲೇ ಟ್ವೀಟ್ ಮಾಡಿದ ಪ್ರಧಾನಿ ಮೋದಿ.

74
firstsuddi

ನವದೆಹಲಿ : ಇಂದು ವೀರ ವನಿತೆ ಒನಕೆ ಓಬವ್ವ ಜಯಂತಿಯಾಗಿದ್ದು, ಪ್ರಧಾನಿ ಮೋದಿ ಅವರು ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕøತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೋಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.

ಒನಕೆ ಓಬವ್ವ ಜನ್ಮ ದಿನವಾದ ನವೆಂಬರ್ 11ರಂದು ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿಯನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಒನಕೆ ಓಬವ್ವರ ಹೆಸರು ಚಿತ್ರದುರ್ಗದ ಇತಿಹಾಸದಲ್ಲಿ ಮರೆಯಲಾಗದು, ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ರಹನುಮಪ್ಪನವರ ಹೆಂಡತಿಯಾಗಿದ್ದರು. ಚಿತ್ರದುರ್ಗದ ಮೇಲೆ ಹೈದರಾಲಿಯ ಸೈನಿಕರು ಹಠಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ನೂರಾರು ಶತ್ರು ಸೈನಿಕರನ್ನು ಜಜ್ಜಿ, ಹೊಡೆದು ಕೊಂದಿದ್ದರು. ಆದರೆ ಕೊನೆಯಲ್ಲಿ ಎದುರಾಳಿಯು ಬೆನ್ನ ಹಿಂದೆ ಬಂದಿದ್ದನ್ನು ಗಮನಿಸಲಾಗದೇ ಶತ್ರುವಿನ ಕತ್ತಿಗೆ ಬಲಿಯಾಗಿದ್ದರು.