ಒಳ ನುಸುಳಲು ಸಂಚು ರೂಪಿಸುತ್ತಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಯೋಧರು…

114
firstsuddi

ಚಂಡೀಗಢ : ಗಡಿಯಲ್ಲಿ ಒಳ ನುಸುಳಲು ಪ್ರಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಇಂದು ಮುಂಜಾನೆ ಅತ್ತಾರಿ ಗಡಿಭಾಗದಲ್ಲಿ ಇಬ್ಬರು ಉಗ್ರರು ಭಾರತದ ಗಡಿಗೆ ನುಸುಳಲು ಸಂಚು ರೂಪಿಸುತ್ತಿದ್ದರು. ಈ ವೇಳೆ ಗಸ್ತು ತಿರುಗುತ್ತಿದ್ದ ಭದ್ರತಾ ಪಡೆಗಳು ಉಗ್ರರ ಚಲನವಲನಗಳಲ್ಲಿ ಅನುಮಾನಗೊಂಡು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದು, ಉಗ್ರರ ಬಳಿಯಿದ್ದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಭದ್ರತಾ ಪಡೆಗಳು ಶೋಧಕಾರ್ಯ ಮುಂದುವರೆಸಿದ್ದಾರೆ.