ಓಮಿಕ್ರಾನ್ ಆತಂಕ : ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಿದ ಯುಪಿ ಸರ್ಕಾರ.

72
firstsuddi

ಲಕ್ನೋ : ಕೊರೊನಾ ರೂಪಾಂತರಿ ಓಮಿಕ್ರಾನ್ ಆತಂಕದ ಹಿನ್ನಲೆ ಉತ್ತರಪ್ರದೇಶ ಸರ್ಕಾರ ನಾಳೆಯಿಂದ ನೈಟ್ ಕರ್ಫ್ಯೂ ಜಾರಿ ಮಾಡಿದೆ.

ನಾಳೆಯಿಂದ ರಾತ್ರಿ 11 ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರಲಿದೆ. ದೇಶದಲ್ಲಿ ಓಮಿಕ್ರಾನ್ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯುಪಿ ಸರ್ಕಾರ ತಿಳಿಸಿದೆ.

ಮದುವೆ ಸಮಾರಂಭಗಳಲ್ಲಿ 200ಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಲ್ಲದೇ ಹೊರ ರಾಜ್ಯದಿಂದ ಬರುವ ಜನರನ್ನು ಪರೀಕ್ಷಿಸಿ, ಅವರ ಆರೋಗ್ಯದ ಮೇಲೆ ನಿಗಾ ಇಡಬೇಕು. ಅಗತ್ಯವಿದ್ದರೆ ಅವರನ್ನು ಆಸ್ಪತ್ರೆಗೆ ದಾಖಲಿಸಬೇಕು ಅಥವಾ ಅವರನ್ನು ಕ್ವಾರಂಟೈನ್ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.