ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ…

47
firstsuddi

ಶ್ರೀನಗರ : ದಕ್ಷಿಣ ಪ್ರದೇಶದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾ ಪ್ರದೇಶದಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‌ನಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.

ಪುಲ್ವಾಮಾ ಜಿಲ್ಲೆಯ ಪಡಗಂಪೋರಾ ಅವಂತಿಪೋರಾದಲ್ಲಿ ಎನ್ ಕೌಂಟರ್ ನಡೆದಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯದಲ್ಲಿವೆ. ಎನ್‍ಕೌಂಟರ್‌ನಲ್ಲಿ ಒಬ್ಬ ಉಗ್ರನನ್ನು ಕೊಲ್ಲಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.

ಭಾನುವಾರ ಮುಂಜಾನೆ ಕಾಶ್ಮೀರಿ ಪಂಡಿತ ಸಂಜಯ್ ಶರ್ಮಾ ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.