ಕಂದಕಕ್ಕೆ ಉರುಳಿದ ಬಸ್, 6ಮಂದಿ ಸಾವು…

190
firstsuddi

ಜಾರ್ಖಂಡ್ : ಬಸ್ ಕಂದಕಕ್ಕೆ ಉರುಳಿ 6ಮಂದಿ ಮೃತಪಟ್ಟಿರುವ ಘಟನೆ ಜಾರ್ಖಂಡ್‍ನ ಗವ್ರಾದಲ್ಲಿ ನಡೆದಿದೆ. ಬಸ್ ಅಂಬಿಕಾಪುರದಿಂದ ನಾಸಾರಾಮ್ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಮಧ್ಯರಾತ್ರಿ 2.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲೇ 6 ಮಂದಿ ಮೃತ ಪಟ್ಟಿದ್ದು, 39ಜನರು ಗಂಭಿರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಬಸ್ ಕಂದಕಕ್ಕೆ ಉರುಳಿದ್ದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.