ಕಂದಾಯ ಸಚಿವ ಆರ್.ಅಶೋಕ್‍ಗೆ ಕೋವಿಡ್ ದೃಢ…

72
firstsuddi

ಬೆಂಗಳೂರು : ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದಿದ್ದ ಕೋವಿಡ್ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಇದೀಗ ಕೊರೊನಾ ಸೋಂಕು ತಗುಲಿದೆ. ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕರ್ನಾಟಕದಲ್ಲಿ ಕೊರೊನಾ ಹಾಗೂ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ನಿನ್ನೆ 5,031 ಕೊರೊನಾ ಪ್ರಕರಣಗಳು ದೃಢಪಟ್ಟಿತ್ತು. ಬೆಂಗಳೂರಿನಲ್ಲೇ 4,324 ಪ್ರಕರಣ ವರದಿಯಾಗಿತ್ತು. ಹಾಗೆಯೇ 107 ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 333 ಕ್ಕೆ ಏರಿಕೆಯಾಗಿದೆ.