ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ…

60
firstsuddi

ಬೆಂಗಳೂರು : ಭಾರೀ ಮಳೆಗೆ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ನಗರದ ಹೂಡಿ ಸಮೀಪದ ಗ್ರಾಫೈಟ್ ಇಂಡಿಯಾ ಬಳಿ ನಡೆದಿದೆ.

ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮೃತರನ್ನು ಬಿಹಾರ ಮೂಲದ ಜೈನುದ್ದೀನ್, ಹರಮಾನ್ ಎಂದು ಗುರುತಿಸಲಾಗಿದೆ.

ನಿನ್ನೆ ರಾತ್ರಿ ಮಳೆ ಬಂದ ಹಿನ್ನೆಲೆಯಲ್ಲಿ ಬಿಎಲ್ ಆರ್ ಕಂಪನಿಗೆ ಸೇರಿದ ಕಟ್ಟಡದ ಕೆಳಗಿರುವ ರೂಮ್ ನಲ್ಲಿ ಕಾರ್ಮಿಕರು ಮಲಗಿದ್ದರು. ಆದರೆ ಬಿಎಲ್ ಆರ್ ಕಂಪನಿಗೆ ಸೇರಿದ ಹಳೆಯ ಕಟ್ಟಡ ಇದಾಗಿದ್ದು, ಇದನ್ನು ತೆರವು ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ಸಂಪೂರ್ಣ ಬಿಲ್ಡಿಂಗ್ ಕುಸಿದಿದ್ದು, ಈ ವೇಳೆ ಕೆಳಗೆ ರೂಮ್ ನಲ್ಲಿ ಮಲಗಿದ್ದ ಇಬ್ಬರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಮೂವರು ಗಾಯಾಳುಗಳನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.