ಉಡುಪಿ : ಪರೀಕ್ಷೆಯಲ್ಲಿ 10 ಮಾರ್ಕ್ಸ್ ಕಡಿಮೆ ಬಂತು ಎಂದು ಪ್ರಿನ್ಸಿಪಾಲ್ ಬೈದಿದಕ್ಕೆ ಮನನೊಂದ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಉಡುಪಿ ಜಿಲ್ಲೆ ಪೆರ್ಡೂರಿನಲ್ಲಿ ನಡೆದಿದೆ.
ಹೆಬ್ರಿಯಲ್ಲಿರುವ ಎಸ್ಆರ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ದೀಪ್ತಿ ಉನ್ನತ ಶ್ರೇಣಿಯಲ್ಲಿ ಪಾಸಾಗಿ ಉಚಿತ ಸೀಟ್ ಪಡೆದಿದ್ದಳು. ಆದರೆ ಈ ಬಾರಿಯ ಪರೀಕ್ಷೆಯಲ್ಲಿ 10 ಅಂಕ ಕಡಿಮೆ ಗಳಿಸಿದ್ದಕ್ಕೆ ಫೈನ್ ಹಾಕುವುದಾಗಿ ಪ್ರಿನ್ಸಿಪಾಲ್ ಗದರಿದ್ದರಂತೆ.
ಎಲ್ಲಾ ವಿದ್ಯಾರ್ಥಿಗಳ ಮುಂದೆ ನನ್ನ ಮಗಳನ್ನು ನಿಂದಿಸಿದ್ದಾರೆ. ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿದ್ದಾಳೆಂದು ತಂದೆ ಸುರೇಶ್ ಮೆಂಡನ್ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.










