ನವದೆಹಲಿ- ಇಂದು ಸಂಜೆ 4 ಗಂಟೆಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಅಂತಿಮ ಸಂಸ್ಕಾರಗಳು ನಡೆಯಲಿದ್ದು,ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಅವರ ಪತಿ ಅಂತ್ಯಕ್ರಿಯೆಗಳನ್ನು ನೆರವೇರಿಸಲಿದ್ದಾರೆ. ಬ್ರಾಹ್ಮಣ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ಆಗಲಿದೆ.
ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಹಿರಿಯ ನಾಯಕ ಎಲ್.ಕೆ.ಅಡ್ವಾನಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಮಂತ್ರಿ ಮಂಡಲದ ಎಲ್ಲ ಸಹೋದ್ಯೋಗಿಗಳು, ಸಂಸದರು, ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ವಿವಿಧ ಪಕ್ಷಗಳ ಮುಖಂಡರು, ವಿವಿಧ ಕ್ಷೇತ್ರಗಳ ಖ್ಯಾತನಾಮರು ಅಜಾತಶತ್ರುವಿನ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ.