ಕನಕಪುರ ಕ್ಷೇತ್ರದಿಂದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ…

76
firstsuddi

ರಾಮನಗರ : ಕನಕಪುರ ಕ್ಷೇತ್ರದಿಂದ ಡಿಕೆ ಶಿವಕುಮಾರ್ ಸಹೋದರ ಡಿಕೆ ಸುರೇಶ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಇಂದು ಬೆಂಗಳೂರು ಪದ್ಮನಾಭನಗರದಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ದಿಢೀರ್ ಬೆಳವಣಿಗೆಯೊಂದರಲ್ಲಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ಏ.17 ರಂದು ಡಿಕೆ ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದರು. ಆದರೆ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಡಿಕೆ ಸುರೇಶ್ ಕನಕಪುರದಿಂದ ಇಂದು ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.