ಕರ್ನಾಟಕದಲ್ಲಿ 1 ಸಾವಿರದ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ…

142
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 45 ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1032ಕ್ಕೆ ಏರಿಕೆಯಾಗಿದೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ಪ್ರಕಾರ ಇಂದು ದಕ್ಷಿಣ ಕನ್ನಡ-16, ಬೆಂಗಳೂರು-13, ಉಡುಪಿ-5, ಬೀದರ್ ಹಾಗೂ ಹಾಸನ-3, ಚಿತ್ರದುರ್ಗ-2, ಶಿವಮೊಗ್ಗ, ಕೋಲಾರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ.