ಕನ್ನಡದ ಹಿರಿಯ ಕವಿ, ನಾಡೋಜ ಡಾ. ಚನ್ನವೀರ ಕಣವಿ ಇನ್ನಿಲ್ಲ…

34
firstsuddi

ಧಾರವಾಡ : ಕನ್ನಡದ ಹಿರಿಯ ಕವಿ, ನಾಡೋಜ ಡಾ. ಚೆನ್ನವೀರ ಕಣವಿ(93) ಅವರು ಧಾರವಾಡದ ಎಸ್ ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ಕಣವಿ ಅವರನ್ನು ಜ.14 ರಂದು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

28-6-1928ರಂದು ಗದಗ ತಾಲೂಕಿನ ಹೊಂಬಳ ಗ್ರಾಮದಲ್ಲಿ ಜನಿಸಿದ್ದ ಕಣವಿಯವರು 1952ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂಎ ಪದವಿ ಪಡೆದರು. ಅದೇ ವಿವಿಯ ಪ್ರಸಾರಾಂಗ ವಿಭಾಗದ ಕಾರ್ಯದರ್ಶಿಯಾಗಿ ಸೇವೆ ಆರಂಭಸಿದ್ದರು. ಬಳಿಕ 1956ರಲ್ಲಿ ಅದೇ ಪ್ರಸಾರಾಂಗ ವಿಭಾಗದ ನಿರ್ದೇಶಕರಾಗಿ 1983ರವರೆಗೆ ಸೇವೆ ಸಲ್ಲಿಸಿದ್ದಾರೆ.

ಕಾವ್ಯಾಕ್ಷಿ, ಭಾವಜೀವಿ, ಆಕಾಶಬುಟ್ಟಿ, ಮಧುಚಂದ್ರ, ಮಣ್ಣಿನ ಮೆರವಣಿಗೆ, ದಾರಿ ದೀಪ, ನೆಲ ಮುಗಿಲು, ಎರಡು ದಡ, ನಗರದಲ್ಲಿ ನೆರಳು, ಜೀವಧ್ವನಿ, ಕಾರ್ತಿಕದ ಮೋಡ, ಜೀನಿಯಾ, ಹೊಂಬೆಳಕು, ಶಿಶಿರದಲ್ಲಿ ಬಂದ ಸ್ನೇಹಿತ, ಚಿರಂತನ ದಾಹ ಸೇರಿ 15ಕ್ಕೂ ಹೆಚ್ಚು ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ.