ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ ಕೆ.ಸಿ.ಎನ್ ಚಂದ್ರಶೇಖರ್ ಅವರು ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಯಿಂದ ಶಿವಾನಂದ ಸರ್ಕಲ್ ಬಳಿ ಇರುವ ಅವರ ನಿವಾಸದಲ್ಲಿ ಚಂದ್ರು ಅವರ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಬಬ್ರುವಾಹನ, ಹುಲಿ ಹಾಲಿನ ಮೇವು, ಸೇರಿದಂತೆ ಹಲವು ಸಿನಿಮಾಗಳ ನಿರ್ಮಾಣ ಮಾಡಿದ್ದರು. ಅಲ್ಲದೇ ಕರ್ನಾಟಕ ಫಿಲಂ ಛೇಂಬರ್ ನ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು.










