ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ಪಾಸಾದ ಪವಿತ್ರಾ ಲೋಕೇಶ್.

72
firstsuddi

ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಅವರು ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಪಿಎಚ್‌ಡಿ ಸಾಮಾನ್ಯ ಪ್ರವೇಶ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಬಹುಭಾಷಾ ನಟಿ ಪವಿತ್ರಾ ಲೋಕೇಶ್ ಸೇರಿದಂತೆ 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. ಕನ್ನಡ ವಿವಿಯಲ್ಲಿ 981 ಜನರು ಸಾಮಾನ್ಯ ಪ್ರವೇಶ ಪರೀಕ್ಷೆ ಎದುರಿಸಿದ್ದರು. ಆ ಪೈಕಿ ಒಟ್ಟು 259 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ಕನ್ನಡ ವಿವಿ ಕುಲಸಚಿವ ಡಾ.ಸುಬ್ಬಣ್ಣ ರೈ ಅವರು ಮಾಹಿತಿ ನೀಡಿದ್ದಾರೆ.

ಕನ್ನಡ ವಿವಿ ವ್ಯಾಪ್ತಿಯ ಅಧ್ಯಯನ ವಿಭಾಗ, ಮಾನ್ಯತ ಕೇಂದ್ರ ಹಾಗೂ ವಿಸ್ತರಣಾ ಕೇಂದ್ರಗಳಲ್ಲಿ ಲಭ್ಯವಿರುವ ಸ್ಥಾನ ಮತ್ತು ಮಾರ್ಗದರ್ಶಕರ ಸಂಖ್ಯೆಗೆ ಅನುಗುಣವಾಗಿ ಸೀಟು ಹಂಚಿಕೆ ಮಾಡಲಾಗುತ್ತಿದೆ. ಪವಿತ್ರಾ ಲೋಕೇಶ್ ಬೆಳಗಾವಿ ವಿಸ್ತರಣಾ ಕೇಂದ್ರದಲ್ಲಿ ಸಂಶೋಧನೆ ಕೈಗೊಳ್ಳಲು ಭಾಷಾ ನಿಕಾಯದಡಿ ಪ್ರವೇಶ ಪರೀಕ್ಷೆ ಬರೆದಿದ್ದರು. ಕಳೆದ ಮೇ 30ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು.