ಕಬ್ಬು ತುಂಬಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ-ಮೂವರು ಸ್ಥಳದಲ್ಲೇ ಸಾವು…

288
firstsuddi

ಯಾದಗಿರಿ : ಕಬ್ಬು ತುಂಬಿ ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ವಡಗೇರಾ ತಾಲ್ಲೂಕಿನ ಗಡ್ಡೆಸೂಗುರು ಬಳಿ ನಡೆದಿದೆ. ಬಾಷಪ್ಪ(35), ರಮೇಶ್(30) ಸಿದ್ದಮ್ಮ(55) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಇಂದು ಬೆಳಗ್ಗಿನ ಜಾವ ಯಾದಗಿರಿಯಿಂದ ಉಳ್ಳೆಸೂಗುರು ಹಾಗೂ ಹಾಲಗೇರಾ ಗ್ರಾಮಗಳ ಕಡೆಗೆ ಆಟೋದಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯಲ್ಲಿ ಐವರಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ವಡಗೇರಾ ಠಾಣಾ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.