ಕರ್ನಾಟಕದಲ್ಲಿ ಇಂದು ಒಂದೇ ದಿನ 149 ಪ್ರಕರಣ ಪತ್ತೆ…

172
firstsuddi

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 149 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1395ಕ್ಕೆ ಏರಿಕೆಯಾಗಿದೆ. ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಇಂದು ಬೆಳಗ್ಗಿನ ಹೆಲ್ತ್ ಬುಲೆಟಿನ್‍ನಲ್ಲಿ 127 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಈಗಿನ ಹೆಲ್ತ್ ಬುಲೆಟಿನ್‍ನಲ್ಲಿ 22 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.