ಕರ್ನಾಟಕದಲ್ಲಿ 4 ಮಂದಿಗೆ ಕೊರೊನಾ ಸೋಂಕು-ಆರೋಗ್ಯ ಸಚಿವ ಶ್ರೀ ರಾಮುಲು ಸ್ಪಷ್ಟನೆ…

459
firstsuddi

ಬೆಂಗಳೂರು : ಇಡೀ ವಿಶ್ವದಾಧ್ಯಂತ ಭೀತಿ ಹೆಚ್ಚಿಸಿರುವ ಕೊರೊನಾ ಸೋಂಕು ಕನಾಟಕದಲ್ಲಿ 4 ಮಂದಿಗೆ ತಗುಲಿದೆ ಎಂದು ಆರೋಗ್ಯ ಸಚಿವರಾದ ಬಿ. ಶ್ರೀರಾಮುಲು ಅವರು ತಮ್ಮ ಟ್ವಿಟರ್ ಮೂಲಕ ಸ್ಪಷ್ಠಪಡಿಸಿದ್ದಾರೆ. “ ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID-19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ ಎಂದು ಟ್ವಿಟರ್‍ನಲ್ಲಿ ತಿಳಿಸಿದ್ದಾರೆ.