ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಯಡಿಯೂರಪ್ಪ ಅವರನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ : ಬಸನಗೌಡ ಯತ್ನಾಳ್.

287
firstsuddi

ವಿಜಯಪುರ : ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಯಡಿಯೂರಪ್ಪ ಅವರನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಯತ್ನಾಳ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ಭೇಟಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ರಾಜ್ಯದ ಇಬ್ಬರು ಸಚಿವರ ಕುತಂತ್ರದಿಂದ ಯಡಿಯೂರಪ್ಪ ಅವರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಬಿ.ಎಸ್. ಯಡಿಯೂರಪ್ಪ ಅವರ ಬಗ್ಗೆ ನಿಮಗೆ ಅಸಮಾಧಾನವಿದ್ದರೆ ಅವರಿಗೆ 70 ವರ್ಷವಾಗಿದೆ ಎಂದು ಕರೆಯಿಸಿ ರಾಜೀನಾಮೆ ಪಡೆದುಕೊಳ್ಳಲಿ. ಅನಂತ್‍ಕುಮಾರ್ ಮತ್ತು ಯಡಿಯೂರಪ್ಪ ಅವರು ಈ ಹಿಂದೆ ಜಗಳವಾಡುತ್ತಿದ್ದರು. ಆದರೆ ಪಕ್ಷ, ಕರ್ನಾಟಕ, ದೇಶದ ಹಿತ ಬಂದಾಗ ಒಗ್ಗೂಡುತ್ತಿದ್ದರು. ಆದರೆ ಈಗಾ ರಾಜ್ಯದಲ್ಲಿ ನಡೆಯುತ್ತಿರುವುದೇ ಬೇರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.