ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವರ್ಷದಲ್ಲಿ 17 ಪರೀಕ್ಷೆ ನಡೆಸಿ ದಾಖಲೆ.

32

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2024 ರಲ್ಲಿ ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ರೆಕಾರ್ಡ್ ಸೃಷ್ಟಿಸಿದೆ. ಪ್ರಾಧಿಕಾರವು 17 ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿತ್ತು, ಇದರಲ್ಲಿ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ ಮತ್ತು ಪೊಲೀಸ್ ಸಬ್-ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಗಳು 2 ಬಾರಿ ನಡೆದು 6,052 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡಿದೆ. ಪ್ರಾಧಿಕಾರವು ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪ್ರಕ್ರಿಯೆ, ಪ್ರವೇಶ ಪರೀಕ್ಷೆ, ಸೀಟು ಹಂಚಿಕೆ ಇತ್ಯಾದಿಗಳನ್ನು ಎಂದಿನಂತೆ ನಿರ್ವಹಿಸುತ್ತಿದೆ. ಇವುಗಳ ಜತೆಗೆ ಸರಕಾರದ ನಾನಾ ಇಲಾಖೆಗಳ ನೇಮಕಾತಿ ಪರೀಕ್ಷೆಗಳನ್ನು ನಡೆಸಿದೆ. ಈ ಮೂಲಕ ಕಳೆದೊಂದು ವರ್ಷದಲ್ಲಿ 20 ಲಕ್ಷಕ್ಕೂ ಅರ್ಜಿಗಳನ್ನು ನಿರ್ವಹಿಸಲಾಗಿದೆ. ಪ್ರಾಧಿಕಾರದ 3 ದಶಕಗಳಿಗೂ ಇದು ದಾಖಲೆಯಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ. ಮೊದಲ ಹಂತದಲ್ಲಿ 545 ಹುದ್ದೆಗಳನ್ನು ಭರ್ತಿ ಮಾಡಲಾಗಿದ್ದು, 2ನೇ ಹಂತದಲ್ಲಿ 402 ಸ್ಥಾನಗಳನ್ನು ಭರ್ತಿ ಮಾಡಲಾಗಿದೆ. 947 ಪಿಎಸ್‍ಐಗಳ ನೇಮಕಾತಿ 2 ಹಂತಗಳಲ್ಲಿ ಪೂರ್ಣಗೊಂಡಿರುವುದು ಗಮನ ಸೆಳೆಯುವಂತಹ ಸಾಧನೆಯಾಗಿದೆ. ಪರೀಕ್ಷೆಯ ಸಮಯದಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯನ್ನು ಕಾಪಾಡಿಕೊಳ್ಳಲು ಬ್ಲೂಟೂತ್ ಸೇರಿದಂತೆ ಇತರ ಆಧುನಿಕ ಎಲೆಕ್ಟ್ರಾನಿಕ್ ಉಪಕರಣಗಳನ್ನು ಉಪಯೋಗಿಸಿ, ಪರೀಕ್ಷಾ ಅಕ್ರಮ ಎಸಗಲು ಪ್ರಯತ್ನಿಸುವ ಸುಳಿವು ತಿಳಿದು, ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆಗಳನ್ನು ನಡೆಸಿದ್ದು ಬಹಳ ವಿಶೇಷವಾಗಿದೆ.