ಕರ್ನಾಟಕ ರಾಜ್ಯ ಸಹಕಾರಿ ವಸತಿ ಮಂಡಳಿಯ ನಿರ್ದೇಶಕರಾಗಿ ಹೆಚ್.ಎಂ.ನಾರಾಯಣ ಆಯ್ಕೆ.

18

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸಹಕಾರಿ ವಸತಿ ಮಹಾಮಂಡಲದ ಆಡಳಿತ ಮಂಡಳಿಯ ನಿರ್ದೇಶಕರಾಗಿ ನಗರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಹೆಚ್.ಎಂ.ನಾರಾಯಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವಸತಿ ಮಹಾಮಂಡಲದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಡಾ.ಬಿ.ದೇವರಾಜ್. ನಾರಾಯಣ್ ಅವರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು. ಹಿರೇಮಗಳೂರಿನವರಾದ ಹೆಚ್.ಎಂ.ನಾರಾಯಣ ಅವರು ನೇಕಾರ ಸಮುದಾಯಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾಗಿ. ಯೂತ್ ಹಾಸ್ಟೆಲ್ ಅಸೋಸಿಯೇಶನ್ನಿನ ಜಿಲ್ಲಾಧ್ಯಕ್ಷರಾಗಿ. ರಾಜ್ಯ ದೇವಾಂಗ ಸಮಾಜದ ನಿರ್ದೇಶಕರಾಗಿ ಹಾಗೂ ಮಲೆನಾಡು ದೇವಾಂಗ ಸಂಘದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.