ಕರ್ನಾಟಕ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ಭೀಮನಗೌಡ ಸಂಗನಗೌಡ ಪಾಟೀಲ್.

87
firstsuddi

ಬೆಂಗಳೂರು : ಕರ್ನಾಟಕ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.

ನೂತನ ಲೋಕಾಯುಕ್ತರಿಗೆ ರಾಜ್ಯಪಾಲ ಥಾವತ್ ಚಂದ್ ಗೆಹ್ಲೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ನೂತನ ಲೋಕಾಯುಕ್ತರು ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವರಾದ ಆರಗ ಜ್ಞಾನೇಂದ್ರ, ಸೋಮಣ್ಣ, ಹಾಲಪ್ಪ ಆಚಾರ್ ಸೇರಿ ಹಲವು ಸಚಿವರು, ಅಧಿಕಾರಿಗಳು, ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು, ನವೆಂಬರ್ 22, 2019ರಂದು ಉಪ ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಪದಗ್ರಹಣ ಮಾಡಿದ್ದರು. ಅವರನ್ನೇ ಇದೀಗ ಕರ್ನಾಟಕ ಲೋಕಾಯುಕ್ತದ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿದೆ.